ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುರ್ಕಾದ ಬಟನ್ನೊಳಗೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.34 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಆತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಪ್ರಯಾಣಿಕನಲ್ಲಿದ್ದ ಬುರ್ಕಾವನ್ನು ತಪಾಸಣೆ ನಡೆಸಿದಾಗ, ಅದರ ಬಟನ್ನೊಳಗಡೆ ಉಂಗುರದಾಕಾರದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ.
ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನಿಂದ 5,34,000 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.
Kshetra Samachara
15/04/2022 05:37 pm