ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಹದೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ 45.83 ಲಕ್ಷ ರೂ. ಚಿನ್ನ ವಶಕ್ಕೆ

ಮಂಗಳೂರು: ದೇಹದೊಳಗೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 45.83 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಯಾಣಿಕ ದುಬೈನಿಂದ ಸ್ಪೈಸ್ ಜೆಟ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಅನುಮಾನದ ಮೇಲೆ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈತ ದೇಹದೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈತ ಚಿನ್ನವನ್ನು ಪುಡಿ ರೂಪದಲ್ಲಿ ಗಮ್ ರೂಪದ ಪರಿಕರದೊಳಗೆ ಅಡಗಿಸಿ ತನ್ನ ದೇಹದೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಈ ಪ್ರಯಾಣಿಕನನ್ನು ಬಂಧಿಸಿ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈತ 878 ಗ್ರಾಂ ತೂಕದ 48,83,160 ರೂ. ಮೌಲ್ಯದ 24 ಕ್ಯಾರೆಟ್ ನ ಶುದ್ಧಚಿನ್ನವನ್ನು ಸಾಗಾಟ ಮಾಡುತ್ತಿದ್ದ.

Edited By : Nagaraj Tulugeri
Kshetra Samachara

Kshetra Samachara

22/08/2022 10:38 pm

Cinque Terre

9.53 K

Cinque Terre

2

ಸಂಬಂಧಿತ ಸುದ್ದಿ