ಕಾಸರಗೋಡು: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ ಓರ್ವ ಕೋವಿಡ್ ಕೇರ್ ಸೆಂಟರ್ ನಿಂದ ಪರಾರಿಯಾಗಿರುವ ಘಟನೆ ಸೆ.29ರ ತಡರಾತ್ರಿ ನಡೆದಿದೆ.
ಉಪ್ಪಳ ಕೈಕಂಬ ನಿವಾಸಿ ಆದಂ ಖಾನ್ ( 24) ಪಾಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆದಂ ಖಾನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಆತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಆತನನ್ನು ಪಾನಕ್ಕಾಡ್ ನ ಕೋವಿಡ್ ಕೇರ್ ಸೆಂಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ನಿನ್ನೆ ತಡರಾತ್ರಿ ಆಸ್ಪತ್ರೆಯ ಕಿಟಕಿಯನ್ನು ತುಂಡರಿಸಿ ಆರೋಪಿ ಪರಾರಿಯಾಗಿದ್ದಾನೆ.
Kshetra Samachara
30/09/2020 03:42 pm