ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ನದಿಗೆ ಹಾರಿ ಕೋಲಾರ ಮೂಲದ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ: ಕೋಲಾರ ಜಿಲ್ಲೆಯ ಚಿಂತಾಮಣಿಯ ನಾಪತ್ತೆಯಾಗಿದ್ದ ದಂಪತಿ ಧರ್ಮಸ್ಥಳದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.

ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಮತ್ತು ಈಶ್ವರಮ್ಮ (52) ಮೃತಪಟ್ಟ ದಂಪತಿ. ಮದ್ದಿರೆಡ್ಡಿ ಹಾಗೂ ಈಶ್ವರಮ್ಮ ಅಕ್ಟೋಬರ್ 31ರಂದು ಚಿಂತಾಮಣಿಯಿಂದ ನಾಪತ್ತೆಯಾಗಿದ್ದರು. ಊರಿನಲ್ಲಿ ದಂಪತಿ ಧರ್ಮಸ್ಥಳಕ್ಕೆ ತೆರಳಿದ್ದಾಗಿ ಸುದ್ದಿ ಹಬ್ಬಿತ್ತು. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ಧರ್ಮಸ್ಥಳಕ್ಕೆ ಬಂದು ಹುಡುಕಾಟದಲ್ಲಿ ತೊಡಗಿದ್ದರು. ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸಂಶಯದಲ್ಲಿ ಹುಡುಕಾಟಕ್ಕೆ ತೊಡಗಿದ್ದರು. ಬೆಳ್ತಂಗಡಿಯ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಉದ್ದಕ್ಕೂ ಹುಡುಕಾಟ ನಡೆದಿತ್ತು.

ಭಾನುವಾರ ಮಧ್ಯಾಹ್ನ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿ ಮೃತದೇಹಗಳು ಸಿಲುಕಿಕೊಂಡಿದ್ದು ಪತ್ತೆಯಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಉಜಿರೆ, ವೇಣೂರು ತಂಡದವರು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ದಂಪತಿ ನವೆಂಬರ್ 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Edited By : Manjunath H D
PublicNext

PublicNext

03/11/2024 09:50 pm

Cinque Terre

56.13 K

Cinque Terre

0

ಸಂಬಂಧಿತ ಸುದ್ದಿ