ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಗೆ ಗರ್ಭಪಾತದ ಆರೋಪ - ವೈದ್ಯರನ್ನು ದೋಷಮುಕ್ತಗೊಳಿಸಿದ ನ್ಯಾಯಾಲಯ

ಮಂಗಳೂರು: ಅಪ್ರಾಪ್ತೆಯ ಗರ್ಭಪಾತ ಮಾಡಿರುವ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರಿನ ವೈದ್ಯ ಡಾ. ಚಂದ್ರಶೇಖರ್‌ ಅವರನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ 12ವರ್ಷ ವಯಸ್ಸಿನ ಬಾಲಕಿಯನ್ನು ಆರೋಪಿತ ಸುಧೀರ್‌ ಹಾಗೂ ಆತನ ಮನೆಯವರು ಗರ್ಭಪಾತ ಮಾಡಿಸಲು ಚಿಕ್ಕಮಗಳೂರಿನ ಡಾ| ಚಂದ್ರಶೇಖರ್‌ ಅವರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ವೈದ್ಯಾಧಿಕಾರಿಗಳು ಬಾಲಕಿಯನ್ನು ವಿಚಾರಿಸಿದಾಗ ಆಕೆಯ ಪ್ರಾಯ 18 ವರ್ಷ 3 ತಿಂಗಳೆಂದು ತಿಳಿಸಿದ್ದರು‌. ಈ ವೇಳೆ ಅಪ್ರಾಪ್ತೆಯು ಆರೋಪಿ ಸುಧೀರ್‌ ತನ್ನ ಪತಿ ಎಂದು ತಿಳಿಸಿದ್ದಳು. ಆಸ್ಪತ್ರೆಗೆ ಬರುವ ಮೊದಲು ಆಕೆಗೆ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಕಾರಣ ತೀವ್ರ ರಕ್ತಸ್ರಾವ ಆಗಿತ್ತು. ಆದ್ದರಿಂದ ವೈದ್ಯರು ಸಂತ್ರಸ್ತೆಯ ಪ್ರಾಣ ಉಳಿಸುವ ಉದ್ದೇಶದಿಂದ ಸಂತ್ರಸ್ತೆಯ ಪತಿಯೆಂದು ತಿಳಿಸಿದ್ದ ಆರೋಪಿ ಸುಧೀರ್‌ನಿಂದ ಕಾನೂನು ಪ್ರಕಾರ ಒಪ್ಪಿಗೆ ಪತ್ರ ಪಡೆದುಕೊಂಡು ತಕ್ಷಣ ಚಿಕಿತ್ಸೆ ನೀಡಿ ಗರ್ಭದಲ್ಲಿ ಉಳಿದಿದ್ದ ರಕ್ತ ಮಿಶ್ರಿತ ಕಣಗಳನ್ನು ತೆಗೆದಿದ್ದರು.

ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ವೈದ್ಯರು ಸಂತ್ರಸ್ತೆಗೆ ಸಂಬಂಧಿಸಿದ ಎಲ್ಲ ವೈದ್ಯಕೀಯ ದಾಖಲೆಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದರು. ಡಾ. ಚಂದ್ರಶೇಖರ್‌ ಅವರ ಪರವಾಗಿ ಹಿರಿಯ ನ್ಯಾಯವಾದಿ ಪಿ.ಪಿ.ಹೆಗ್ಡೆ ಮತ್ತು ರಾಜೇಶ್‌ ಕುಮಾರ್‌ ಅಮ್ಟಾಡಿ ವಾದಿಸಿದ್ದರು. ನ್ಯಾಯಾಲಯವು ಡಾ.ಚಂದ್ರಶೇಖರ್‌ ಅವರನ್ನು ದೋಷಮುಕ್ತಗೊಳಿಸಿದೆ. ಸುಧೀರ್‌ ದೋಷಿ ಎಂದು ತೀರ್ಪು ನೀಡಿದೆ.

Edited By : Nagaraj Tulugeri
PublicNext

PublicNext

20/11/2024 09:08 pm

Cinque Terre

39.28 K

Cinque Terre

0