ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ- 14 ಮಂದಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿರುವ ಪ್ರಕರಣದ ರಾಮಸೇನಾ ಸಂಘಟನೆಯ 13 ಮಂದಿ ಕಾರ್ಯಕರ್ತರು ಹಾಗೂ ಓರ್ವ ಟಿವಿ ಕ್ಯಾಮರಾಮ್ಯಾನ್‌ಗೆ ಮಂಗಳೂರು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ರಾಮಸೇನಾ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14‌ ಮಂದಿಯನ್ನು ಬರ್ಕೆ ಪೊಲೀಸರು ಮಂಗಳೂರು ಜೆಎಂಎಫ್‌ಸಿ 6ನೇ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ‌. ನ್ಯಾಯಾಲಯವು ಫೆ.7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಗುರುವಾರ ಬೆಳಗ್ಗೆ ಸುಮಾರು 11:50ರ ಸುಮಾರಿಗೆ 11ಮಂದಿಯ ತಂಡ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ "ಕಲರ್ಸ್" ಎಂಬ ಯೂನಿಸೆಕ್ಸ್ ಮಸಾಜ್ ಪಾರ್ಲರ್‌ಗೆ ನುಗ್ಗಿ ದಾಂಧಲೆ ನಡೆಸಿತ್ತು. ಮಸಾಜ್ ಪಾರ್ಲರ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪಿಸಿ ಮಹಿಳಾ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ್ದರು. ಅಷ್ಟು ಮಾತ್ರವಲ್ಲದೆ, ಪಾರ್ಲರ್ ಉಪಕರಣಗಳನ್ನು ಧ್ವಂಸಗೊಳಿಸಿ, ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದರು.

ಆದ್ದರಿಂದ ಪಾರ್ಲರ್ ಮಾಲಕ ನೀಡಿದ ದೂರಿನ ಆಧಾರದ ಮೇಲೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 06/2025 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. BNS ನ ಸೆಕ್ಷನ್ 329(2), 324(5), 74, 351(3), 115(2), 109, 352, ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Edited By : Manjunath H D
PublicNext

PublicNext

24/01/2025 08:50 pm

Cinque Terre

62.44 K

Cinque Terre

6