ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉದ್ಯಮಿ ಮೇಲೆ ತಲವಾರು ದಾಳಿ

ಮಂಗಳೂರು: ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರಾತ್ರಿ‌ ನಡೆದಿದೆ.ಕಂದಾವರ ಕೈಕಂಬದ ಅಬ್ದುಲ್ ಅಝೀಝ್, ದಾಳಿಗೊಳಗಾದ ಉದ್ಯಮಿ. ಇವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ. ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ಗಾಯಗೊಂಡ ಅಝೀಝ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಬಟ್ಟೆಬರೆ ಅಂಗಡಿ ಹೊಂದಿರುವ ಅಝೀಝ್ ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

16/11/2020 11:58 am

Cinque Terre

46.73 K

Cinque Terre

0