ಮಂಗಳೂರು: ನಗರದ ರಥಬೀದಿಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಗೊಂದಲದ ಘಟನೆ ಬಗ್ಗೆ ಬಂದರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಾದ ಸಾಯಿ ಸಂದೇಶ್, ಸುಮಂತ್ ಆಳ್ವ, ನಿತೇಶ್ ಸಹಿತ 15 ಮಂದಿ ವಿರುದ್ಧ ದೂರು ದಾಖಲಾಗಿದೆ. ಈ ಮಧ್ಯೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿಯ ಫೋಟೊವನ್ನು ಬಳಸಿ ಅವಾಚ್ಯ ಶಬ್ದಗಳನ್ನು ಜಾಲತಾಣದಲ್ಲಿ ಹರಿಯಬಿಟ್ಟು, ಆತನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ವಿದ್ಯಾರ್ಥಿಯೊಬ್ಬ ಸೈಬರ್ ಠಾಣೆಗೆ ಪ್ರತಿ ದೂರು ನೀಡಿದ್ದಾನೆ.
ಈ ಬಗ್ಗೆ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ದ.ಕ. ಜಿಲ್ಲಾ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಮಂಗಳೂರು ವಿವಿ ರಿಜಿಸ್ಟ್ರರ್‌ಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ. ಗೊಂದಲದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿ.ಸಿ. ತಿಳಿಸಿದ್ದಾರೆ.
PublicNext
06/03/2022 10:24 pm