ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವೀಡಿಯೋ ವೈರಲ್ ಬೆನ್ನಲ್ಲೇ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿರುವ ವೀಡಿಯೋ ಕೂಡಾ ವೈರಲ್ ಆಗಿದೆ. ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸರು 8ಮಂದಿ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರೂ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪಿಯು ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಪಕ್ಕದಲ್ಲಿಯೇ ಇರುವ ಬಾವುಟಗುಡ್ಡೆಯ ಅಪಾರ್ಟ್ ಮೆಂಟ್ ಕೊಠಡಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಆರೋಪಿ ವಿದ್ಯಾರ್ಥಿಗಳು ಕಿಸ್ಸಿಂಗ್ ಪಂದ್ಯಾಟದಲ್ಲಿ ತೊಡಗಿದ್ದರು. 8 ಮಂದಿ ವಿದ್ಯಾರ್ಥಿಯರು ಹಾಗೂ ಮೂವರು ವಿದ್ಯಾರ್ಥಿನಿಯರು ಈ ಆಟದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಗೆ ಕಿಸ್ ಮಾಡುವ ವೀಡಿಯೋ ವೈರಲ್ ಮಾಡಿದ್ದ ವಿದ್ಯಾರ್ಥಿಯನ್ನು ಗುರುವಾರ ಬೆಳಗ್ಗೆ ವಶಕ್ಕೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಸಂಜೆ ವೇಳೆಗೆ ಎಲ್ಲಾ ಎಂಟು ಮಂದಿ ವಿದ್ಯಾರ್ಥಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ಮಾಡಿದ್ದಾರೆ.
ಪೊಲೀಸರ ವಶದಲ್ಲಿರುವ 8 ಮಂದಿ ಮಂದಿಯೂ ಅಪ್ರಾಪ್ತರಾಗಿದ್ದಾರೆ. ಇವರು ಮಂಗಳೂರು, ಕೇರಳ ಮತ್ತು ವಿವಿಧ ಜಿಲ್ಲೆಯ ಮೂಲದವರಾಗಿದ್ದಾರೆ. ಇವರಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಬಳಿಕ ಹೆತ್ತವರು ವಕೀಲರ ಮುಂದೆ ವಿಚಾರಣೆ ನಡೆಸಿ ಹೆತ್ತವರೊಂದಿಗೆ ಕಳುಹಿಸಿಕೊಡಲಾಗಿದೆ. ಜೊತೆಗೆ ವಿದ್ಯಾರ್ಥಿನಿಯರು ಮತ್ತು ಅವರ ಹೆತ್ತವರನ್ನೂ ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.
PublicNext
22/07/2022 06:10 pm