ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ ಸಿಸಿಬಿ ಹೆಗಲಿಗೆ: ತನಿಖಾಧಿಕಾರಿಯಾಗಿ ಮಹೇಶ್ ಕುಮಾರ್

ಮಂಗಳೂರು: ನಗರದ ಸುರತ್ಕಲ್‌ನಲ್ಲಿ ನಡೆದಿರುವ ಫಾಝಿಲ್ ಹತ್ಯೆ ಪ್ರಕರಣದ ತನಿಖೆಯು ಸಿಸಿಬಿ ಹೆಗಲಿಗೆ ವರ್ಗಾವಣೆಯಾಗಿದೆ. ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇಮಕಗೊಂಡಿದ್ದಾರೆ.

ಸುರತ್ಕಲ್‌ನ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಸುರತ್ಕಲ್ ಠಾಣಾ ನಿರೀಕ್ಷಕ ಚಂದ್ರಪ್ಪ ತನಿಖೆ ನಡೆಸುತ್ತಿದ್ದಾರೆ. ಆದರೆ ಮೃತಪಟ್ಟ ಫಾಝಿಲ್ ಸಂಬಂಧಿಕರು ಪ್ರಕರಣದ ತನಿಖೆಯನ್ನು ಉನ್ನತಾಧಿಕಾರಿಗಳಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿ ತನಿಖೆಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಹೇಶ್ ಕುಮಾರ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ತಕ್ಷಣ ಮಹೇಶ್ ಕುಮಾರ್ ಅವರು ತನಿಖೆಯನ್ನು ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

Edited By : Nagaraj Tulugeri
PublicNext

PublicNext

31/07/2022 02:35 pm

Cinque Terre

41.07 K

Cinque Terre

1

ಸಂಬಂಧಿತ ಸುದ್ದಿ