ಪಡುಬಿದ್ರಿ: ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ 2,87,606 ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕರಾದ ಟಿ.ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂದಿಗೆ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿನ ಮೊಹಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ 2,87,606 ರೂ. ಮೌಲ್ಯದ
13,073 ಕೆ.ಜಿ. ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
21/09/2022 02:31 pm