ಮಲ್ಪೆ: ಉಡುಪಿಯ ಮಲ್ಪೆ ಬಂದರಿನಲ್ಲಿ ಮೀನು ಹೆಕ್ಕಿ ಮಾರಾಟ ಮಾಡುತ್ತಿದ್ದ ಮತ್ತು ಪೋಷಕರಿಗೆ ಮೀನು ಮಾರಾಟ ಮಾಡಲು ಸಹಾಯ ಮಾಡುತ್ತಿದ್ದ 17 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಕಲಾ .ಸಾರ್ವಜನಿಕ ಶಿಕ್ಷಣ ಇಲಾಖೆ ,ಪೊಲೀಸ್ ಇಲಾಖೆ ,ಮಕ್ಕಳ ಸಹಾಯವಾಣಿ ,ನಾಗರಿಕ ಸೇವಾ ಟ್ರಸ್ಟ್ ಕೂಡ ಭಾಗವಹಿಸಿದ್ದವು.
ಕೆಲ ದಿನಗಳಿಂದ ಇಲ್ಲಿ ಅಪ್ರಾಪ್ತ ಮಕ್ಕಳು ಮೀನು ಆಯುವ ಕೆಲಸ ಮಾಡುವ ಬಗ್ಗೆ ಖಚಿತ ಮಾಹಿತಿ ಪಡೆದ ರಕ್ಷಣಾ ಘಟಕ,ಇತರೆ ಇಲಾಖೆ ಅಧಿಕಾರಿಗಳ ಸಹಾಯದಿಂದ ದಿಢೀರ್ ದಾಳಿ ನಡೆಸಿತು.ಈ ವೇಳೆ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್ .ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ .ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ .ಕಾರ್ಮಿಕ ಅಧಿಕಾರಿ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
Kshetra Samachara
29/10/2020 09:46 am