ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ಜೀನ್ಸ್ ಪ್ಯಾಂಟ್, ಒಳ‌ ಉಡುಪು, ಗುದನಾಳ ಸೇರಿದಂತೆ ವಿವಿಧ ರೀತಿಯಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಸೆ. 6 ರಿಂದ 10ವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ 5 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಜೀನ್ಸ್ ಪ್ಯಾಂಟ್, ಒಳಉಡುಪು, ಬನಿಯನ್, ಶೂಗಳು ಮತ್ತು ಗುದನಾಳದಲ್ಲಿ ಬಚ್ಚಿಟ್ಟು ಚಿನ್ನವನ್ನು ಸಾಗಾಟ ಮಾಡಲಾಗುತ್ತಿತ್ತು. ಚಿನ್ನವನ್ನು ಪೇಸ್ಟ್ ಹಾಗೂ ಪೌಡರ್ ರೂಪದಲ್ಲಿ ಪರಿವರ್ತಿಸಿ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ದುಬೈನಿಂದ ಮಂಗಳೂರಿಗೆ ಬಂದಿಳಿದಿರುವ ವಿಮಾನಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಸಾಗಿಸುತ್ತಿದ್ದ ಓರ್ವ ಮಹಿಳೆ ಮತ್ತು ನಾಲ್ವರು ಪುರುಷ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಐದು ಪ್ರಕರಣಗಳಲ್ಲಿ ಒಟ್ಟು 24 ಕ್ಯಾರೆಟ್ ಶುದ್ಧತೆಯ 869 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ 44,33,780 ರೂ. ಎಂದು ಅಂದಾಜಿಸಲಾಗಿದೆ.

Edited By : Nagaraj Tulugeri
PublicNext

PublicNext

11/09/2022 11:16 am

Cinque Terre

25.17 K

Cinque Terre

0

ಸಂಬಂಧಿತ ಸುದ್ದಿ