ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: 2 ಲಾರಿ ,3 ಮೆಟ್ರಿಕ್ ಟನ್ ಮರಳು ವಶಕ್ಕೆ!

ಉಡುಪಿ: ಉಡುಪಿಯ ಪೆರಂಪಳ್ಳಿ ಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 2 ಲಾರಿ ಮತ್ತು 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಮಾರ್ಗದರ್ಶನದಲ್ಲಿ ಈ ದಾಳಿ ನಡೆಯಿತು. ಸ್ವರ್ಣ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದಾಗ ಹಿರಿಯ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ನೇತೃತ್ವದ ತಂಡ ದಾಳಿ ನಡೆಸಿತು. ಈ ಸಂಬಂಧ ಭೂವಿಜ್ಞಾನಿಯವರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

Edited By : Nagaraj Tulugeri
PublicNext

PublicNext

15/09/2022 09:17 pm

Cinque Terre

32.03 K

Cinque Terre

0

ಸಂಬಂಧಿತ ಸುದ್ದಿ