ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಗಡಿಭಾಗದಲ್ಲಿ ಅಕ್ರಮ ಮರಳು ದಂಧೆ: ನಿದ್ದೆಗೆ ಜಾರಿದ ಅಧಿಕಾರಿಗಳು!

ಮಂಗಳೂರು: ನದಿಪಾತ್ರಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಸುವಂತಿಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಸ್ಪಷ್ಟ ಆದೇಶ ನೀಡಿದ್ದರೂ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಅನ್ನುವಂತೆ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೀತಾ ಇದೆ.

ಜಿಲ್ಲೆಯ ಗಡಿಭಾಗಗಳಲ್ಲಿ ನಡೀತಿರೋ ಅಕ್ರಮ ದಂಧೆಗೆ ಸ್ಥಳೀಯ ಜನಪ್ರತಿನಿಧಿಗಳ ಕೃಪೆಯಿದ್ದು ಪೊಲೀಸ್ ಅಧಿಕಾರಿಗಳಿಂದ ಹಿಡಿದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳವರೆಗೆ ಎಲ್ಲರೂ ಕೈ ಬಿಸಿ ಮಾಡಿಕೊಳ್ಳುತ್ತಿದ್ದು ಸಂಜೆಯಾಗುತ್ತಿದ್ದಂತೆ ನೂರಾರು ಲೋಡ್ ಮರಳು ಸಾಗಾಟವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸುಳ್ಯ ತಾಲೂಕಿನ ಅರಂತೋಡು ಬಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಪಯಸ್ವಿನಿ ನದಿಯಿಂದ ದಿನವೊಂದಕ್ಕೆ ನೂರಾರು ಲೋಡ್ ಗಳಷ್ಟು ಮರಳು ತೆಗೆಯಲಾಗುತ್ತಿದೆ. ತಾಲೂಕಿನ ಅರಂತೋಡು ಪೇಟೆ ದಾಟಿ ಮುಂದಕ್ಕೆ ಹೋಗುವಾಗ ಕಾಮಧೇನು ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಸಂಜೆಯಾದರೆ ಸಾಕು ಮರಳು ಸಾಗಾಟದ ಟಿಪ್ಪರ್ ಗಳದ್ದೇ ಹಾವಳಿ. ಮಲ್ಲಡ್ಕ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ನಡೀತಾ ಇರೋ ಅಕ್ರಮ ಮರಳು ಅಡ್ಡೆಯಿಂದಾಗಿ ಸಾರ್ವಜನಿಕ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಭಾರೀ ಗಾತ್ರದ ಟಿಪ್ಪರ್, ಹಿತಾಚಿ ಸಂಚಾರಕ್ಕೆ ಸಾರ್ವಜನಿಕ ರಸ್ತೆ ಬಳಸುತ್ತಿದ್ದು ಇದರಿಂದ ಸ್ಥಳೀಯರು ಹೈರಾಣಾಗಿದ್ದಾರೆ. ಸಂಜೆ 6 ಗಂಟೆಯಿಂದ ನಸುಕಿನವರೆಗೂ ಎಡೆಬಿಡದೆ ಮರಳು ಸಾಗಾಟ ನಡೆಯುತ್ತಿದ್ದು ಮಲ್ಲಡ್ಕದಲ್ಲಿ ನದಿಯ ಪಕ್ಕದ ಮನೆಯ ಹಿಂಭಾಗದಲ್ಲೇ ಅಕ್ರಮ ಮರಳು ದಾಸ್ತಾನು ಇರಿಸಲಾಗಿದ್ದು ಗಣಿ ಇಲಾಖೆಗೆ ಗೊತ್ತಿದ್ದರೂ ದಾಳಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಂಧೆಗೆ ಪುತ್ತೂರು ಶಾಸಕರ ಕೃಪೆ!?

ಅರಂತೋಡು, ಅಜ್ಜಾವರ, ಮರ್ಕಂಜ, ಸಂಪಾಜೆಯಲ್ಲಿ ನಡೀತಾ ಇರೋ ಮರಳು ದಂಧೆಯಲ್ಲಿ ತೊಡಗಿರುವ ಉಬರಡ್ಕ ಮೂಲದ ವ್ಯಕ್ತಿ ಪುತ್ತೂರು ಶಾಸಕ ಮಠಂದೂರು ಆಪ್ತನೆನ್ನಲಾಗುತ್ತಿದ್ದು ಅವರ ಜೊತೆಯಲ್ಲೇ ಓಡಾಡುತ್ತಾನೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಹತ್ತಾರು ಹೊಸ ಟಿಪ್ಪರ್ ಗಳನ್ನು ಮರಳು ಸಾಗಾಟಕ್ಕೆ ಬಳಸುತ್ತಿದ್ದು ಅಕ್ರಮ ಸಾಗಾಟದ ಬಗ್ಗೆ ಪ್ರಶ್ನೆ ಮಾಡಿದರೆ ಶಾಸಕರ ಹೆಸರು ಹೇಳಿ ಬಾಯಿ ಮುಚ್ಚಿಸುತ್ತಾನೆ ಎಂಬ ದೂರುಗಳು ಕೇಳಿಬರುತ್ತಿವೆ.

ಸರಕಾರಕ್ಕೆ ರಾಜಧನ ವಂಚಿಸಿ ನಡೀತಿರೋ ದಂಧೆ ಇಷ್ಟು ಚಿಗಿತುಕೊಳ್ಳಲು ಕಾರಣ ಯಾರು ಎನ್ನುವುದು ಸ್ಥಳೀಯರ ಪ್ರಶ್ನೆ. ಪಯಸ್ವಿನಿ ನದಿಯಲ್ಲಿ ನಿರಂತರ ಮರಳು ದಂಧೆಯಿಂದ ಪ್ರಾಕೃತಿಕ ಸಮತೋಲನ ತಪ್ಪಿಹೋಗಿ ಮುಂದೊಂದು ದಿನ ಈ ಭಾಗದಲ್ಲೂ ಪ್ರವಾಹ ಪರಿಸ್ಥಿತಿ ತಲೆದೋರಿದರೆ ಅಚ್ಚರಿ ಪಡಬೇಕಿಲ್ಲ. ಹಾಗಾಗುವ ಮುನ್ನ ಜಿಲ್ಲಾಡಳಿತ, ಗಣಿ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಎಚ್ಚೆತ್ತು ದಂಧೆಗೆ ಶಾಶ್ವತ ಬ್ರೇಕ್ ಹಾಕಬೇಕಿದೆ.

ಹಸಿರು ಪೀಠದ ಆದೇಶಕ್ಕೆ ಡೋಂಟ್ ಕೇರ್!

ಜಲಾಶಯಗಳು, ಕೆರೆಗಳು, ಕೊಳಗಳು ಹಾಗೂ ಚೌಗು ಪ್ರದೇಶಗಳಲ್ಲಿ ಹೂಳೆತ್ತುವ ನೆಪದಲ್ಲಿ ಮರಳು ಗಣಿಗಾರಿಕೆ ನಡೆಸುವಂತಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯ ಪೀಠ ಆದೇಶಿಸಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ

ಸಚಿವಾಲಯದ ಸುಸ್ಥಿರ ಮರಳುಗಾರಿಕೆ ನಿರ್ವಹಣೆ ಮಾರ್ಗಸೂಚಿ 2016, ಮರಳು ಗಣಿಗಾರಿಕೆಯ ಮೇಲ್ವಿಚಾರಣೆ ಹಾಗೂ ಜಾರಿ ಮಾರ್ಗಸೂಚಿ 2020 ಹೊರಡಿಸಿರುವ ಹಾಗೂ ಎನ್‌ಜಿಟಿಯ ಪ್ರಧಾನ ಪೀಠ ಮಾರ್ಗಸೂಚಿಯ ಪ್ರಕಾರವೇ ಹೂಳೆತ್ತುವ ಕಾಮಗಾರಿ-

ಗಳನ್ನು ನಡೆಸಬೇಕು ಎಂದು ಪೀಠ ನಿರ್ದೇಶನ ನೀಡಿದೆ. ಮರಳು ಗಣಿಗಾರಿಕೆಯ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಪ್ರತಿ ಜಿಲ್ಲೆಯಲ್ಲಿ ಕಾರ್ಯಪಡೆಯನ್ನು ಸ್ಥಾಪಿಸಬೇಕು. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದಾಗ ಗಣಿನಿಯಮಗಳ ಅಡಿಯಲ್ಲಿ ದಂಡ ವಿಧಿಸುವ ಹಾಗೂ ಪರಿಸರ ಪರಿಹಾರಗಳನ್ನು ವಸೂಲಿ ಮಾಡುವಂತಹ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಸೂಚಿಸಿದೆ.

ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು ಪ್ರತಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ, ಹೂಳೆತ್ತುವ ಕಾಮಗಾರಿಗಳು, ಚೌಗು ಪ್ರದೇಶಗಳ ಮೇಲೆ ನಿಗಾ ಇಡಬೇಕು. ಒಂದು ವೇಳೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೀಠ ಹೇಳಿದೆ.

Edited By : PublicNext Desk
Kshetra Samachara

Kshetra Samachara

11/10/2022 09:46 pm

Cinque Terre

21.38 K

Cinque Terre

2

ಸಂಬಂಧಿತ ಸುದ್ದಿ