ಮಂಗಳೂರು: ಹಿಜಾಬ್ ವಿವಾದದ ಕುರಿತು ಮಾಧ್ಯಮ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಇತ್ತೀಚೆಗೆ ಹಿಜಾಬ್ ವಿಚಾರವಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಅಕ್ಷಿತ್ ರನ್ನು ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದು, ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ನಾಯಕ ಫೈಝಲ್ ರೆಹಮಾನ್, ಜಿಲ್ಲಾ ನಾಯಕರುಗಳಾದ ಸತ್ತಾರ್ ಬಂದರ್, ಮೊಹಮ್ಮದ್ ಫೈಝಲ್, ಶ್ರೀನಾಥ್, ಯಶು, ಸಿನಾನ್ ಉಪಸ್ಥಿತರಿದ್ದರು.
Kshetra Samachara
17/02/2022 03:14 pm