ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕರಾವಳಿಯಲ್ಲಿ15 ದಿನಗಳೊಳಗೆ ಮರಳುಗಾರಿಕೆಗೆ ಕ್ರಮ: ಸಚಿವ ಸಿ.ಸಿ. ಪಾಟೀಲ್

ಮಂಗಳೂರು: ಅಂತಾರಾಜ್ಯ ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ ಕೈಕೊಳ್ಳಲಾಗುವುದು. ಗಡಿ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಟ ತಡೆಗೆ 196 ಸಿ.ಸಿ.ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 15 ದಿನಗಳ ಒಳಗೆ ಮರಳು ತೆಗೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಗುರುತಿಸಲಾದ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಿಆರ್ ಝಡ್ ಪ್ರದೇಶದಲ್ಲಿ 104 ಕುಟುಂಬಗಳಿಗೆ ಮರಳು ತೆಗೆಯಲು ಅನುಮತಿ ನೀಡಲಾಗಿದೆ. ಈ ಪ್ರದೇಶದಲ್ಲಿ ಇನ್ನು ಕೆಲವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದರು.

Edited By : Manjunath H D
Kshetra Samachara

Kshetra Samachara

08/01/2021 09:47 am

Cinque Terre

27.54 K

Cinque Terre

4

ಸಂಬಂಧಿತ ಸುದ್ದಿ