ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೂಗಿ, ಕಿವುಡಿ ಬಾಲಕಿಯ ಮೇಲೆ ಅತ್ಯಾಚಾರ ಆರೋಪ ಸಾಬೀತು: ಅಪರಾಧಿಗೆ ಫೆ.22ಕ್ಕೆ ಶಿಕ್ಷೆ ಪ್ರಕಟ

ಉಡುಪಿ: ಕಿವಿ ಕೇಳದ, ಮಾತನಾಡಲು ಬಾರದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪದಡಿಯಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ಎಲ್ಲಾ ದೋಷಾರೋಪಣೆಗಳು ರುಜುವಾತಾದ ಹಿನ್ನೆಲೆ ಆತ ಅಪರಾಧಿಯಾಗಿದ್ದು ಫೆ.22 ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶರಾದ ಯಾದವ್ ವನಮಾಲಾ ಆನಂದರಾವ್ ಆದೇಶಿಸಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2019ರಲ್ಲಿ ಪ್ರಕರಣ ದಾಖಲಾಗಿತ್ತು. 2018ರ ಡಿಸೆಂಬರ್ ತಿಂಗಳಿನಲ್ಲಿ 15 ವರ್ಷದ ತನ್ನ ಮನೆ ಸಮೀಪದ ಬಾಲಕಿಯನ್ನು ಅವರ ನೆರೆಕೆರೆ ನಿವಾಸಿ ಹರೀಶ್ (33) ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಸಂತ್ರಸ್ತ ಬಾಲಕಿಗೆ ಕಿವಿ ಕೇಳದ, ಮಾತನಾಡಲು ಬಾರದ ಹಿನ್ನೆಲೆ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. 2019ರಲ್ಲಿ ಒಂದು ದಿನ ರಾತ್ರಿ ಆಕೆ ಹೊಟ್ಟೆನೋವಿನಿಂದ ಬಳಲಿ ತೀವ್ರ ರಕ್ತಸ್ರಾವ ಉಂಟಾಗಿದ್ದು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.

ಪೋಷಕರು ವಿಚಾರಿಸಿದಾಗ ಆಗ ಘಟನೆ ತಿಳಿದಿದ್ದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಬಾಲಕಿ 7ನೇ ತರಗತಿ ಓದಿದ್ದು ಪಕ್ಕದ ಮನೆಯ ಆರೋಪಿಯನ್ನು ಕೈ ಸನ್ನೆ ಹಾಗೂ ಬರವಣಿಗೆ ಮೂಲಕ ಗುರುತಿಸಿದ ಹಿನ್ನೆಲೆ ಫೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಅಂದಿನ ಕಾರ್ಕಳ ಪ್ರಭಾರ ಸಿಪಿಐ ಮಹೇಶ್ ಪ್ರಸಾದ್ ಮೊದಲಿಗೆ ತನಿಖೆ ನಡೆಸಿದ್ದು ಬಳಿಕ ಸಿಪಿಐ ಸಂಪತ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 22 ಸಾಕ್ಷಿಗಳ ಪೈಕಿ ಸಂತ್ರಸ್ತೆ ತಾಯಿ ಸೇರಿದಂತೆ 13 ಮಂದಿ ಸಾಕ್ಷ್ಯ ನುಡಿದಿದ್ದರು. ಡಿ.ಎನ್.ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿತ್ತು.

Edited By : Vijay Kumar
Kshetra Samachara

Kshetra Samachara

20/02/2021 10:15 pm

Cinque Terre

16.39 K

Cinque Terre

1