ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ಅನಂತ ಸೇರಿಗಾರ್ ಬಂಧನ !

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 65 ವರ್ಷ ಪ್ರಾಯದ ಅನಂತ ಸೇರಿಗಾರ್ ಎಂಬಾತನನ್ನು ಬಂಧಿಸಿರುವ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ.

ಮಕ್ಕಳ ಸಹಾಯವಾಣಿಗೆ ೧೧ ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ನೀಡಿದ್ದಳು.ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ,ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು.ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

06/08/2021 04:19 pm

Cinque Terre

23.72 K

Cinque Terre

13