ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದಾತನಿಗೆ ಜೀವಾವಧಿ ಶಿಕ್ಷೆ

ಉಡುಪಿ: ಮೂರು ವರ್ಷಗಳ ಹಿಂದೆ ಕಾರ್ಕಳ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾದ ವ್ಯಕ್ತಿ‌ ಅಪರಾಧಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ಕೂಲಿ ಕೆಲಸ ಮಾಡುತ್ತಿದ್ದ 30 ವರ್ಷ ಪ್ರಾಯದ ಶಂಕರ್ ಎನ್ನುವಾತ ಅಪರಾಧಿಯಾಗಿದ್ದು ಆತ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ, 15 ಸಾವಿರ ದಂಡ ವಿಧಿಸಿದ್ದು ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಾದಾ ಶಿಕ್ಷೆ, ಕೊಲೆ ಬೆದರಿಕೆ ಹಾಕಿದ್ದಕ್ಕೆ 3 ವರ್ಷ ಜೈಲು, 5 ಸಾವಿರ ದಂಡ ವಿಧಿಸಿದ್ದು ದಂಡ ತೆರದಿದ್ದರೆ 6 ತಿಂಗಳು ಸಾದಾ ಸಜೆಗೆ ಆದೇಶಿಸಲಾಗಿದೆ. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ಪರಿಹಾರ ನೀಡಲು ಮತ್ತು ದಂಡದ ಹಣದಲ್ಲಿ ಸಂತ್ರಸ್ತೆಗೆ 15 ಸಾವಿರ ಹಾಗೂ 5 ಸಾವಿರ ಸರಕಾರಕ್ಕೆ ನೀಡಲು ಉಡುಪಿ‌ ಫೋಕ್ಸೋ ಕೋರ್ಟ್ ತೀರ್ಪಿತ್ತಿದೆ. ಕಾರ್ಕಳ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ ಈ ಘಟನೆ 2018ರಲ್ಲಿ ನಡೆದಿತ್ತು.

Edited By : Nagaraj Tulugeri
Kshetra Samachara

Kshetra Samachara

13/08/2021 09:52 pm

Cinque Terre

30.98 K

Cinque Terre

5

ಸಂಬಂಧಿತ ಸುದ್ದಿ