ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿ ಅತ್ಯಾಚಾರ, ಕೊಲೆ ಪ್ರಕರಣ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಪಿಎಂಗೆ ಮನವಿ

ಉಡುಪಿ: ದೆಹಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮತ್ತು ಆಯಾ ತಾಲೂಕು ಘಟಕಗಳ ವತಿಯಿಂದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ದೆಹಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ನಿರ್ಭಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ಕೇಂದ್ರ ಸರಕಾರ ಅತ್ಯಾಚಾರದಂತಹ ಹೀನ ಅಪರಾಧಕ್ಕೆ ಕಡಿವಾಣ ಹಾಕುವುದಾಗಿ ಭರವಸೆಗಳನ್ನು ನೀಡಿ, ಕಾನೂನಿನಲ್ಲಿ ಕೆಲವು ಬದಲಾವಣೆ ತಂದಿತ್ತು. ಇದರಿಂದ ದೇಶಾದ್ಯಂತ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಸೃಷ್ಟಿಯಾಗಬಹುದು ಎಂಬ ಆಶಾಭಾವನೆ ವ್ಯಕ್ತವಾಗಿತ್ತು. ಇದೀಗ ಈ ಆಶಾಭಾವನೆ ಸಂಪೂರ್ಣ ನಿರಾಶೆ ಮಾತ್ರವಲ್ಲ, ಹತಾಶೆಯಾಗಿ ಪರಿವರ್ತನೆಯಾಗುವಂತಹ ಬೆಳವಣಿಗೆಗಳು ನಡೆದಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ದಿಲ್ಲಿ ಪೊಲೀಸರ ಪ್ರಕಾರವೇ ರಾಜಧಾನಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಮೊದಲ 6 ತಿಂಗಳುಗಳಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ.63.3 ಹೆಚ್ಚಾಗಿವೆ. ಉತ್ತರ ಭಾರತದ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದಾಳಿ ಪ್ರಕರಣಗಳು ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಲೇ ಇವೆ. 2019ರ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯುರೋ ವಾರ್ಷಿಕ ವರದಿಯ ಪ್ರಕಾರ ದೇಶಾದ್ಯಂತ ಆ ವರ್ಷ 32,033 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅಂದರೆ ದಿನಕ್ಕೆ 88 ಅತ್ಯಾಚಾರ ಪ್ರಕರಣಗಳು. ಮಕ್ಕಳ ಹಕ್ಕುಗಳ ಸಂಸ್ಥೆ ಪ್ರಕಾರ ದೇಶದಲ್ಲಿ ಪ್ರತಿ 15 ನಿಮಿಷಗಳಿಗೆ ಒಂದು ಮಗುವಿನ ಮೇಲೆ ಲೈಂಗಿಕ ದಾಳಿ ನಡೆಯುತ್ತದೆ ಮತ್ತು ಕಳೆದ 10 ವರ್ಷಗಳಲ್ಲಿ ಈ ಪ್ರಮಾಣ ಶೇ.500 ಹೆಚ್ಚಳವಾಗಿದೆ. ನಮ್ಮ ದೇಶದಲ್ಲಿ ಸುಮಾರು ಶೇ.28 ಮಾತ್ರ ಇದೆ ಎಂದು ಮನವಿಯಲ್ಲಿ ದೂರಲಾಗಿದೆ.

Edited By : PublicNext Desk
Kshetra Samachara

Kshetra Samachara

17/09/2021 05:48 pm

Cinque Terre

7.14 K

Cinque Terre

0

ಸಂಬಂಧಿತ ಸುದ್ದಿ