ಕುಂದಾಪುರ: ಸಾಮಾಜಿಕ ಮುಂದಾಳು ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.
ಕೊಲೆ ಸಂಚು ರೂಪಿಸಿದ ಆರೋಪದಡಿ ಬಂಧಿತನಾಗಿರುವ ಬಾಲಚಂದ್ರ ಭಟ್ ಈ ಹಿಂದೆ ಪ್ರಕರಣದ ತನಿಖೆ ಸಂದರ್ಭ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದೀಗ ದೋಷಾರೋಪಣಾ ಪಟ್ಟಿ ಸಲ್ಲಿಕೆಯ ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ, ಆದೇಶ ನೀಡಿದ್ದಾರೆ. ಅಂದ ಹಾಗೆ ಆರೋಪಿಯು ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದಾನೆ.
ಜೂ.5ರಂದು ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿತ್ತು.
Kshetra Samachara
08/10/2021 11:37 am