ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿದೆ ಅಂತ ಕೇಸು ದಾಖಲಾಗಿದೆ. ಇಬ್ಬರನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪೊಲೀಸರ ತನಿಖೆ ವೇಗವಾಗಿ ನಡೆಯುತ್ತಿದೆ. ಬಿಗಿಯಾದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಅತ್ಯಾಚಾರ ಪ್ರಕರಣವನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.
Kshetra Samachara
09/10/2021 03:36 pm