ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದಲಿತ ನೌಕರನಿಗೆ ದೌರ್ಜನ್ಯ ಎಸಗಿದ ಆರೋಪಿಗಳನ್ನು ಶೀಘ್ರ ಬಂಧಿಸಿ: ದಸಂಸ ಆಗ್ರಹ

ಉದ್ಯಾವರ: ಉದ್ಯಾವರ ಗ್ರಾಮ ಪಂಚಾಯತ್ ನ ದಲಿತ ಸರಕಾರಿ ನೌಕರ ಶಿವರಾಜು ಅವರಿಗೆ ಉದ್ಯಾವರ ಗ್ರಾಮ ಪಂಚಾಯತ್ ನ ಗ್ರಾಮಸಭೆಯಲ್ಲಿ ಬಹಿರಂಗವಾಗಿ ಅವಮಾನಗೊಳಿಸಿ, ದೌರ್ಜನ್ಯ ಎಸಗಿ, ಸಾಮಾಜಿಕ ಬಹಿಷ್ಕಾರ ಹಾಕಲಾಗಿತ್ತು. ಈ ಸಂಬಂಧ ಕಾಪು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಾದ ಶೇಖರ್ ಕೋಟ್ಯಾನ್, ಭಾಸ್ಕರ್ ಕೋಟಾನ್ ಜಾಮೀನು ಅರ್ಜಿ ಸಲ್ಲಿಸಿದ್ದು ,ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಕಾಪು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ 25 ದಿವಸ ಕಳೆದರೂ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೇ ಮೀನಮೇಷ ಎಣಿಸುತ್ತಿದೆ ಎಂದು ದಸಂಸ ಆರೋಪಿಸಿದೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೋಲೀಸರು ಆರೋಪಿಗಳನ್ನು ಬಂಧಿಸದೇ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸದೇ ಇರುವುದರಿಂದ ಪ್ರಕರಣದ ಪ್ರಮುಖ ಸಾಕ್ಷಿಗಳನ್ನು ನಾಶ ಮಾಡುವ ಸಾಧ್ಯತೆ ಇದೆ, ಆರೋಪಿಗಳು ಯಾವುದೇ ಭಯವಿಲ್ಲದೇ ತಿರುಗಾಡುತ್ತಿದ್ದಾರೆ.ಆರೋಪಿಗಳು ರಾಜಕೀಯವಾಗಿ, ಆರ್ಥಿಕವಾಗಿ, ಪ್ರಬಲರಾಗಿದ್ದು ಪ್ರಕರಣದ ಸಂತ್ರಸ್ಥರಾದ ದಲಿತ ಸರಕಾರಿ ನೌಕರರನ್ನು ಉದ್ಯಾವರ ಗ್ರಾಮ ಪಂಚಾಯತ್ ನಿಂದ ಓಡಿಸುವುದಾಗಿ ಹೇಳುತ್ತಾ ತಿರುಗಾಡುತ್ತಿದ್ದಾರೆ. ಪ್ರಕರಣದ ಸಂತ್ರಸ್ಥರಾದ ದಲಿತ ಸರಕಾರಿ ನೌಕರನಿಗೆ ಆರೋಪಿಗಳಿಂದ ಬೆದರಿಕೆ ಇರುವ ಕಾರಣ ಅವರನ್ನು ಕೂಡಲೇ ಬಂಧಿಸಿ ನ್ಯಾಯದೊರಕಿಸಬೇಕು ಎಂದು ದಸಂಸ ಮುಖಂಡರು ಆಗ್ರಹಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

20/10/2021 05:10 pm

Cinque Terre

13.43 K

Cinque Terre

0