ಮಂಗಳೂರು: ನಕ್ಸಲ್ ಚಟುವಟಿಕೆಗಳ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಬಂಧಿಸಲ್ಪಟ್ಟಿದ್ದ ವಿಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರನ್ನು ನಿರ್ದೋಷಿ ಎಂದು ಇಂದು ತೀರ್ಪು ಪ್ರಕಟಿಸಿದೆ.
ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ, ಅವರ ತಂದೆ ಲಿಂಗಣ್ಣ ಮಲೆಕುಡಿಯ ನಿರ್ದೋಷಿಗಳು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ತೀರ್ಪು ನೀಡಿದ್ದಾರೆ.
ವಿಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳ ಬಂಧಿಸಿತ್ತು. ಬಳಿಕ ನ್ಯಾಯಾಲಯಕ್ಕೆ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ವಿಠಲ ಮಲೆಕುಡಿಯ ಅವರನ್ನು 6ನೇ ಆರೋಪಿಯನ್ನಾಗಿ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು 7ನೇ ಆರೋಪಿಯನ್ನಾಗಿಸಲಾಗಿತ್ತು.
Kshetra Samachara
21/10/2021 06:54 pm