ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಉರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಹೆಡ್ ಕಾನ್ಸ್ ಸ್ಟೇಬಲ್ ಅವರನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ಹಾಗೂ ಸಂತ್ರಸ್ತೆಯ ನಡುವೆ ನಡೆದಿರುವ ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿಯೇ ರಾಜಿ ಪಂಚಾಯಿತಿ ನಡೆಸಲು ಪೊಲೀಸರು ಯತ್ನಿಸಿದ್ದರು. ಆರೋಪಿ ರಾಜೇಶ್ ಭಟ್ ಪ್ರಭಾವ ಬಳಸಿ ಪೊಲೀಸರಿಂದ ರಾಜಿ ಪಂಚಾಯಿತಿಗೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮುಚ್ಚಳಿಕೆ ಬರೆದು ಸಹಿ ಹಾಕಲು ಪೊಲೀಸರು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಉರ್ವ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಶ್ರೀಕಲಾ ಮತ್ತು ಹೆಡ್ ಕಾನ್ ಸ್ಟೇಬಲ್ ಪ್ರಮೋದ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
Kshetra Samachara
22/10/2021 06:21 pm