ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಸಜೆ ವಿಧಿಸಿದ ಪೋಕ್ಸೋ ಕೋರ್ಟ್

ಉಡುಪಿ: ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾದ ಹಿನ್ನೆಲೆಯಲ್ಲಿ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ. 30 ವರ್ಷ ಪ್ರಾಯದ ವೆಂಕಟೇಶ ಎನ್ನುವಾತ ಶಿಕ್ಷೆಗೊಳಗಾದ ಅಪರಾಧಿ.

ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಘಟನೆ ವಿವರ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಈ ಘಟನೆ ನಡೆದಿತ್ತು. ಪ್ರಸ್ತುತ ಅಪರಾಧಿಯಾದ ವೆಂಕಟೇಶ್ ಮನೆಗೆ ಆಟ ಆಡಲೆಂದು ನೊಂದ ಐದು ವರ್ಷದ ಬಾಲಕಿ ತೆರಳಿದ್ದ ವೇಳೆ ಆಕೆ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ್ದ.ಬಳಿಕ ಬಾಲಕಿ ವಿಪರೀತ ಅನಾರೋಗ್ಯಕ್ಕೀಡಾದಾಗ ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ‌ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮದ್ಯೆ ಮಗು ತನ್ನ‌ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ದೂರು ದಾಖಲಿಸಲಾಗಿತ್ತು.ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

26/10/2021 09:56 pm

Cinque Terre

11.85 K

Cinque Terre

1

ಸಂಬಂಧಿತ ಸುದ್ದಿ