ಮಂಗಳೂರು: ಇಂಟರ್ಶಿಪ್ ಗೆಂದು ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ಭಟ್ ಪರ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಧ್ರುವ ಹೆಗ್ಡೆ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದರಿಗೆ ಕೋರ್ಟ್ ಜಾಮೀನು ನೀಡಿದೆ. ಅದೇ ರೀತಿ ಆರೋಪಿ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಅನಂತ ಭಟ್ ಎಂಬಾತನಿಗೂ ಗುರುವಾರವೇ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಆರೋಪಿ ರಾಜೇಶ್ ಭಟ್ ಕಚೇರಿಯಲ್ಲಿಯೇ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಸಂತ್ರಸ್ತ ಯುವತಿ ಪೊಲೀಸ್ ದೂರು ದಾಖಲಿಸಿದ್ದಳು. ಈ ಹಿನ್ನೆಲೆಯಲ್ಲಿ ಅ.18ರಂದು ಮಹಿಳಾ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಆ ಬಳಿಕ ಆರೋಪಿ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಪ್ರಯತ್ನಿಸಿದ್ದ. ಆದರೆ, ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ಬಾರಿ ಮುಂದೂಡಿದ್ದು, ಮೂರನೇ ಬಾರಿ ಇಂದು ತಿರಸ್ಕರಿಸಿದೆ.
Kshetra Samachara
29/10/2021 10:50 pm