ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ನಿಗೆ ಹೈಕೋರ್ಟ್ ನಿಂದಲೂ ಜಾಮೀನು ನಿರಾಕರಣೆಯಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದರು.
ಜಿಲ್ಲಾ ನ್ಯಾಯಾಲಯ ಹಾಗೂ ಹೈಕೋರ್ಟ್ನಲ್ಲಿ ನ್ಯಾಯವಾದಿಗೆ ಜಾಮೀನು ದೊರೆಯಬಾರದೆಂದು ನಾವು ಕೋರ್ಟ್ಗೆ ಮನವರಿಕೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಲೆ ವಾರೆಂಟ್ ರಹಿತ ಬಂಧನ ಆದೇಶವನ್ನು ನ್ಯಾಯಾಲಯ ಹೊರಡಿಸಿದೆ ಎಂದರು.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದರೂ, ಇನ್ನೂ ಆರೋಪಿಯ ಬಂಧನ ಸಾಧ್ಯವಾಗಿಲ್ಲ. ಆದರೆ, ಕಾನೂನು ರೀತಿಯಲ್ಲಿ ಆತ ಪ್ರಕರಣದಿಂದ ಪಾರಾಗದಂತೆ ಮಾಡಲಾಗಿದೆ. ಆತ ದೇಶಬಿಟ್ಟು ಹೋಗದಂತೆ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಈಗಾಗಲೇ ಆತನ ಎಲ್ಲಾ ಬ್ಯಾಂಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ನ್ಯಾಯವಾದಿಗೆ ಕೃತ್ಯಕ್ಕೆ ಹಾಗೂ ಕೃತ್ಯದ ಬಳಿಕ ಸಹಕರ ನೀಡಿದವರನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದ್ದು, ಶೀಘ್ರ ಆರೋಪಿಯನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ಶಶಿಕುಮಾರ್ ಎನ್. ಹೇಳಿದರು.
Kshetra Samachara
04/12/2021 08:07 pm