ಮಂಗಳೂರು: ಮೊನ್ನೆ ಮಂಗಳೂರಲ್ಲಿ ಆತ್ಮಹತ್ಯೆ ಮಾಡಿಕೊಂಡ ನಾಲ್ವರ ಆತ್ಮಹತ್ಯೆ ಹಿಂದೆ ಮತಾಂತರ ಯತ್ನವೇ ಕಾರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಮೃತ ವಿಜಯಲಕ್ಷ್ಮಿಯನ್ನು ಇಸ್ಲಾಂಗೆ ಮತಾಂತರ ಮಾಡಲು ನೂರ್ ಜಹಾನ್ ಯತ್ನಿಸಿದ್ದಳು. ಈಕೆಯ ಮನೆಯಲ್ಲಿ ವಿಜಯಲಕ್ಷ್ಮಿ ಕೆಲಸ ಮಾಡ್ತಿದ್ದಳು. ನೂರ್ ಜಹಾನ್ ಮದುವೆ ಬ್ರೋಕರ್ ಕೂಡ ಆಗಿದ್ದಾಳೆ.
ಗಂಡ-ಹೆಂಡತಿ ನಡುವಿನ ಜಗಳವನ್ನು ಎನ್ ಕ್ಯಾಶ್ ಮಾಡಿಕೊಂಡಿದ್ದ ನೂರ್ ಜಹಾನ್, ಮತಾಂತರಕ್ಕೆ ಯತ್ನಿಸಿದ್ದಳು. ಆತ್ಮಹತ್ಯೆ ಮಾಡಿಕೊಂಡ ನಾಗೇಶ್ ಮತ್ತು ಪತ್ನಿ ವಿಜಯಲಕ್ಷ್ಮಿ ಮಧ್ಯೆ ಜಗಳ ನಡೆಯುತ್ತಿತ್ತು. ಹೀಗಾಗಿ ಪತಿ ನಾಗೇಶ್ ಗೆ ಡೈವೋರ್ಸ್ ಕೊಡುವಂತೆ ವಿಜಯಲಕ್ಷ್ಮಿಗೆ ನೂರ್ ಜಹಾನ್ ಹೇಳಿದ್ದಳು. ಆ ಬಳಿಕ ಮುಸ್ಲಿಂ ಯುವಕನಿಗೆ ಮದುವೆ ಮಾಡಿಸುವುದಾಗಿಯೂ ತಿಳಿಸಿದ್ದಳು.ಮದುವೆಗೂ ಮುನ್ನ ಇಸ್ಲಾಂಗೆ ಮತಾಂತರ ಆಗಲು ಹೇಳಿದ್ದ ನೂರ್ ಜಹಾನ್, ವಿಜಯಲಕ್ಷ್ಮಿ ಫೋಟೊ ಬಳಸಿ ಮುಸ್ಲಿಂ ಹುಡುಗನ ಹುಡುಕಾಟ ನಡೆಸಿದ್ದಳು. ಇದೇ ವಿಚಾರದಲ್ಲಿ ನಾಗೇಶ್ ಮತ್ತು ವಿಜಯಲಕ್ಷ್ಮಿ ಮಧ್ಯೆ ಜಗಳ ಆಗ್ತಿತ್ತು.
ಮಾನಸಿಕವಾಗಿ ಕುಗ್ಗಿದ್ದ ನಾಗೇಶ್, ಮೊನ್ನೆ ಮಕ್ಕಳು- ಪತ್ನಿಯನ್ನು ಕೊಂದು ನೇಣಿಗೆ ಶರಣಾಗಿದ್ದ. ಐಪಿಸಿ 306 ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ನೂರ್ ಜಹಾನ್ ಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Kshetra Samachara
11/12/2021 02:07 pm