ಮುಲ್ಕಿ: ಕ್ಷುಲ್ಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಗಳು ಕಿನ್ನಿಗೋಳಿ ಸಮೀಪದ ಉಲ್ಲಂಜೆ ಯುವಕ ಆರ್ಟಿಐ ಕಾರ್ಯಕರ್ತ ಭರತ್ ಮಡಿವಾಳ (30)ಎಂಬಾತನನ್ನು ತನಿಖೆಯ ನೆಪದಲ್ಲಿ ಪೋಲಿಸ್ ಠಾಣೆಗೆ ಕರೆಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗಿರೀಶ್ ಮಡಿವಾಳ ಸಾಮಾಜಿಕ ಜಾಲತಾಣ ವಾಟ್ಸಪ್ನಲ್ಲಿ ಕಿನ್ನಿಗೋಳಿ ಬಿಜೆಪಿ ನಾಯಕ ಭುವನಾಭಿರಾಮ ಉಡುಪ ಬಗ್ಗೆ ಅವಹೇಳನಕಾರಿ ಮೆಸೇಜನ್ನು ಫಾರ್ವರ್ಡ್ ಮಾಡಿದ್ದಾನೆ ಎಂಬ ಆರೋಪದಲ್ಲಿ ಮುಲ್ಕಿ ಪೊಲೀಸರು ಬಂಧಿಸಿ ಕರೆತಂದು ತನಿಖೆ ನಡೆಸುತ್ತಿದ್ದರು.
ಈ ಸಂದರ್ಭ ಕ್ಷುಲ್ಲಕ ಕಾರಣಕ್ಕೆ ಮುಲ್ಕಿ ಪೊಲೀಸರು ಅಮಾಯಕ ಆರೋಪಿಯನ್ನು ಬಂದಿಸಿದ್ದಾರೆ ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ನೇತೃತ್ವದಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಠಾಣೆಗೆ ಮುತ್ತಿಗೆ ಹಾಕಿ ಇನ್ಸ್ಪೆಕ್ಟರ್ ಕುಸುಮಾಧರವರನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭp ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತನಾಡಿ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಅಮಾಯಕನ ಮೇಲೆ ದೌರ್ಜನ್ಯ ನಡೆಸಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಆತನನ್ನು ಬಂಧನದಿಂದ ಬಿಡಬೇಕು. ಶಾಸಕ ಉಮಾನಾಥ ಕೋಟ್ಯಾನ್ ಒತ್ತಡದಲ್ಲಿ ಇದೆಲ್ಲಾ ನಡೆದಿದೆ. ಎಂದು ಶಾಸಕರಿಗೆ ಹಾಗೂ ಬಿಜೆಪಿ ಸರಕಾರಕ್ಕೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು. ಪರಿಸ್ಥಿತಿ ಕೈಮೀರಿತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆಗೆ ಮಣಿದು ಆರೋಪಿ ಗಿರೀಶ್ ಮಡಿವಾಳರನ್ನು ಬಿಡುಗಡೆಗೊಳಿಸಿದ್ದಾರೆ.
ಈ ನಡುವೆ ಅಮಾಯಕ ಗಿರೀಶ್ ಮಡಿವಾಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಮುಲ್ಕಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವಾಟ್ಸಪ್ ಸಹಿತ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ಮಾನಹಾನಿ ಮಾಡಿದ್ದಾರೆ ಮೂರು ಬಿಜೆಪಿ ನಾಯಕರ ವಿರುದ್ಧ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಕಾಣೆಗೆ ಪ್ರತಿದೂರು ನೀಡಿದ್ದಾರೆ.
Kshetra Samachara
11/01/2022 09:21 pm