ಮಂಗಳೂರು: 13ರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ನಗರದ ಬಸ್ ಚಾಲಕನನ್ನು ಪೋಕ್ಸೊ ಕಾಯ್ದೆಯಡಿ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಸದ್ಯ ನಗರದ ಕುಂಜತ್ತಬೈಲ್ ನಿವಾಸಿ, ಬಸ್ ಚಾಲಕ ದಯಾನಂದ(32) ಬಂಧಿತ ಆರೋಪಿ.
ಆರೋಪಿ ದಯಾನಂದ ನಗರದಲ್ಲಿ ಬಸ್ ಚಾಲಕನಾಗಿ ವೃತ್ತಿ ನಿರ್ವಹಿಸುತ್ತಿದ್ದ. ಈತ ಈ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Kshetra Samachara
30/01/2022 09:54 pm