ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ; ಪೊಲೀಸರ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ

ಬಜಪೆ: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ ಬಜಪೆ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎನ್ನಲಾಗಿದ್ದು, ಠಾಣೆಯ ಇನ್ಸ್ ಪೆಕ್ಟರ್ ಸಹಿತ ಐವರು ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವುದರ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೆಸ್ಸೆಸ್ ಹಾಗೂ ಇತರ ಹಿಂದೂ ಪರ ಸಂಘಟನೆಗಳು ಇಂದು ಸಂಜೆ ಬಜಪೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಂತರ ಪೊಲೀಸ್ ಆಯುಕ್ತರು ಹಾಗೂ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ಪ್ರತಿಭಟನೆ ಸಭೆಯಲ್ಲಿ ಹಿಂದೂ ಸಂಘಟನೆಗಳ ಪರವಾಗಿ ಮಾಜಿ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಡಾ.ಸೋಂದಾ ಭಾಸ್ಕರ್ ಭಟ್ ಹಾಗೂ ಸಂಘಟನೆಗಳ ಪ್ರಮುಖರು ಮಾತನಾಡಿದರು.

ಮನವಿ ಸ್ವೀಕರಿಸಿ, ಮಾತನಾಡಿದ ಎಸಿಪಿ ಮಹೇಶ್ ಕುಮಾರ್, ಪ್ರಕರಣದ ಬಗ್ಗೆ ಉನ್ನತ ತಂಡದ ಮೂಲಕ ತನಿಖೆಗೆ ಒಳಪಡಿಸಿ ಮೂರು ದಿನದೊಳಗೆ ವರದಿ ಸಿದ್ಧಪಡಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ತಪ್ಪಿತಸ್ಥರು ಯಾರೇ ಆಗಿರಲಿ, ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.

Edited By : Manjunath H D
Kshetra Samachara

Kshetra Samachara

24/04/2022 10:54 pm

Cinque Terre

16.52 K

Cinque Terre

10