ಮಂಗಳೂರು: ಮಳಲಿ ಮಸೀದಿ ವಿಚಾರದಲ್ಲಿ ವಿಎಚ್‌ಪಿ ವಿರುದ್ಧದ ಮಸೀದಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
ಮಳಲಿ ಮಸೀದಿ ವಿಚಾರದಲ್ಲಿ ಕಾನೂನು ಹೋರಾಟ ನಡೆಯುತ್ತಿದ್ದು, ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ವಿಎಚ್‌ಪಿ ನೀಡಿರುವ ಅರ್ಜಿಯನ್ನು ವಜಾ ಮಾಡಬೇಕೆಂದು ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿ ಆಡಳಿತದಿಂದ ಅರ್ಜಿ ಆಡಳಿತ ಅರ್ಜಿ ಸಲ್ಲಿಸಿತ್ತು. ಇದೀಗ ವಿಎಚ್‌ಪಿ ವಿರುದ್ಧದ ಮಸೀದಿ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಮುಂದಿನ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
Kshetra Samachara
31/05/2022 12:47 pm