ಉಡುಪಿ: ತಮಗೆ ಕೊಲೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಗನ್ ಮ್ಯಾನ್ ಕಳುಹಿಸಿಕೊಟ್ಟಿದೆ, ಆದರೆ ನಾನದನ್ನು ನಯವಾಗಿ ತಿರಸ್ಕರಿಸಿದ್ದೇನೆ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಗನ್ ಮ್ಯಾನ್ ಸಂಸ್ಕೃತಿಯಲ್ಲಿ ಬೆಳೆದವನು ನಾನಲ್ಲ.ಉಡುಪಿಯಲ್ಲಿ ಓಡಾಡುವಾಗ ಗನ್ ಮ್ಯಾನ್ ಬೇಡ ಎಂದು ಎಸ್ಪಿಯವರಿಗೆ ಹೇಳಿದ್ದೇನೆ.
ಈ ಬಗ್ಗೆ ಪಕ್ಷದ ಹಿರಿಯರ ಅಭಿಪ್ರಾಯ ಪಡೆಯುತ್ತೇನೆ.ಪೊಲೀಸ್ ಇಲಾಖೆ ಗನ್ ಮ್ಯಾನ್ ಪಡೆಯಲೇಬೇಕು ಎಂದು ಹೇಳಿದೆ.
ಪೊಲೀಸ್ ಇಲಾಖೆ ತನ್ನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕಾಗಿದೆ. ನಮಗೆಲ್ಲ ಭದ್ರತೆ ನೀಡುತ್ತಾ ಹೋದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಉಡುಪಿಯಲ್ಲಿ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.
Kshetra Samachara
09/06/2022 07:33 pm