ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ನಿವೃತ್ತ ಎಸ್.ಪಿ ಜಯಂತ್ ವಿ.ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್.!

ಉಳ್ಳಾಲ: 14 ವರ್ಷದ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದ ನಿವೃತ್ತ ಎಸ್.ಪಿ ಜಯಂತ್ ವಿ.ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ 14 ವರ್ಷದ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಅವರಿಗೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಕಬೀರ್ ಉಳ್ಳಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಹಿಂದೆ ರೌಡಿ ನಿಗ್ರಹದಳದ ಮುಖ್ಯಸ್ಥರಾಗಿದ್ದ ಜಯಂತ್ ಶೆಟ್ಟಿ ಮತ್ತವರ ಸಿಬ್ಬಂದಿಗಳು ಉಳ್ಳಾಲ ಪರಿಸರದಲ್ಲಿ 2006 ರಲ್ಲಿ ಅಮಾಯಕರ ವಿರುದ್ಧ ವಿನಾಕಾರಣ ದೌರ್ಜನ್ಯವೆಸಗಿದ್ದರು.ಪೊಲೀಸರ ಈ ದೌರ್ಜನ್ಯದ ವಿರುದ್ಧ ತಾನು ಕಾನೂನು ಹೋರಾಟ ನಡೆಸತೊಡಗಿದೆ.

2008 ರಲ್ಲಿ ಉಳ್ಳಾಲದ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಜಯಂತ್ ಶೆಟ್ಟಿ ಕೋಮು ಗಲಭೆಗೆ ಸಂಬಂಧಿಸಿದಂತೆ ನನ್ನನ್ನು ಟಾರ್ಗೆಟ್ ಮಾಡಿ ಬಂಧಿಸಿದ್ದಲ್ಲದೆ ಸೀದ ಬಳ್ಳಾರಿ ಜೈಲಿಗೆ ತಳ್ಳಿದ್ದರು. 8 ದಿನ ನ್ಯಾಯಾಂಗ ಬಂಧನದಲ್ಲಿದ್ದ ನಾನು ಜಾಮೀನಿನಲ್ಲಿ ಬಿಡುಗಡೆಗೊಂಡು ಜಯಂತ್ ಶೆಟ್ಟಿ ಮತ್ತು ಪಿ.ಎಸ್.ಐ .ಶಿವಪ್ರಕಾಶ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದೆ.

ಪ್ರಕರಣ ಹೈಕೋರ್ಟ್ ವರೆಗೂ ಹೋಗಿ ಸತತ ಹೋರಾಟ ನಡೆಸಿದ ಫಲವಾಗಿ ಶಿವಪ್ರಕಾಶ್ ಜಾಮೀನು ಪಡೆದರೆ, ಜಯಂತ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು.ಕಳೆದ ಜೂ.20ರಂದು ನ್ಯಾಯಾಲಯವು ಜಯಂತ್ ಶೆಟ್ಟಿಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ಕಬೀರ್ ಮಾಹಿತಿ ನೀಡಿದ್ದಾರೆ.

Edited By :
Kshetra Samachara

Kshetra Samachara

22/06/2022 07:24 pm

Cinque Terre

8.98 K

Cinque Terre

1

ಸಂಬಂಧಿತ ಸುದ್ದಿ