ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪತ್ನಿ ,ಮೂವರು ಮಕ್ಕಳನ್ನು ಬಾವಿಗೆಸೆದು ತಾನು ಆತ್ಮಹತ್ಯೆಗೆ ಯತ್ನ

ಕಿನ್ನಿಗೋಳಿ ಸಮೀಪದ ಹೊಸಕಾವೇರಿ ಬಳಿ ಪತ್ನಿ ಮಕ್ಕಳನ್ನು ಬಾವಿಗೆಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದೆ.

ಕಿನ್ನಿಗೋಳಿ ಸಮೀಪದ ಹೊಸಕಾವೇರಿ ನಿವಾಸಿ ಹಿತೇಶ್ ಶೆಟ್ಟಿಗಾರ್(38) ಎಂಬಾತ ಮೊದಲು ತನ್ನ ಮಕ್ಕಳಾದ ರಶ್ಮಿತಾ,(17) ಉದಯ (12), ದಕ್ಷಿತ(4) ಎಂಬವರನ್ನು ಬಾವಿಗೆಸೆದು ಬಳಿಕ ಪತ್ನಿ ಲಕ್ಷ್ಮಿ( 28)ಎಂಬವರನ್ನು ಬಾವಿಯೊಳಗೆ ದೂಡಿ ತಾನು ಆತ್ಮಹತ್ಯೆಗೆ ಯತ್ನಿಸಿ ಬಾವಿಗೆ ಹಾರಿದ್ದಾನೆ.

ಈ ಸಂದರ್ಭ ಸ್ಥಳದಲ್ಲಿ ಮಕ್ಕಳ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಹಿತೇಶ್ ಮತ್ತು ಲಕ್ಷ್ಮಿಯನ್ನು ರಕ್ಷಿಸಿದ್ದಾರೆ.

ಮಕ್ಕಳು ಬಾವಿಯೊಳಗೆ ಇದ್ದು ಸ್ಥಳಕ್ಕೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

Edited By :
Kshetra Samachara

Kshetra Samachara

23/06/2022 08:31 pm

Cinque Terre

17.34 K

Cinque Terre

0

ಸಂಬಂಧಿತ ಸುದ್ದಿ