ಕಡಬ: ಮುಸ್ಲಿಂ ಕುಟುಂಬದ ಮನೆಗೆ ಬಿಜೆಪಿ ಕಾರ್ಯಕರ್ತರು ಅಕ್ರಮ ಪ್ರವೇಶ ಮಾಡಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಬೇಳ್ಪಾಡಿ ಎಂಬಲ್ಲಿ ನಡೆದಿದೆ.
ಈ ಹಿಂದೆ ಸೋಡ್ತಿ ವಿಚಾರಕ್ಕೆ ಸಂಬಂಧಿಸಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ, ಶುಕ್ರವಾರ ತಡರಾತ್ರಿ ಬಿಜೆಪಿ ಕಾರ್ಯಕರ್ತರ ತಂಡವೊಂದು ಮತ್ತೊಂದು ತಂಡದ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದು, ಮನೆಯ ಕಿಟಕಿ ಗಾಜು ಒಡೆದು ಹಾಕಿ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ಪತಿ ದೂರು ನೀಡಿದ್ದು, ಬಿಜೆಪಿ ಕಾರ್ಯಕರ್ತರಾದ ಭಾಸ್ಕರ, ಲಿಖಿತ್, ಜಯರಾಮ, ಉದಯ, ರಾಜೇಶ್ ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ.
PublicNext
28/06/2022 07:50 pm