ಸುಳ್ಯ : ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾ ನಿರ್ವಹಿಸುತ್ತಿದ್ದ ಕ್ಲಿನಿಕ್ ವೊಂದನ್ನು ಆರೋಗ್ಯ ಇಲಾಖೆ ಮುಚ್ಚಿಸಿದೆ. ಇನ್ನು ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ದೂರು ದಾಖಲಿಸಲಾಗಿದ್ದು, ಕ್ಲಿನಿಕ್ ನ ವಸ್ತುನ್ನು ಮುಟ್ಟುಗೋಲು ಹಾಕಲಾಗಿದೆ.
ಹೌದು ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ಲಿ ಮ್ಯಾಥ್ಯೂ ಎಂಬವರು ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ನಡೆಸುತ್ತಿದ್ದು ಈ ಕುರಿತು ಆರೋಗ್ಯ ಇಲಾಖೆಗೆ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಕರ್ನಾಟಕ ಆಯುರ್ವೇದ, ಯುನಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ 3 ಬಾರಿ ನೋಟೀಸ್ ನೀಡಲಾಗಿತ್ತು. ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ರೋಸ್ಲಿಯವರು ನೋಡಿರಲಿಲ್ಲ.
ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುವುದು ಕೆಪಿಎಂಇ ಕಾಯ್ದೆ19 ರ ಪ್ರಕಾರ ಕಾನೂನು ಬಾಹಿರವಾಗಿದೆ. ಆದ್ದರಿಂದ ಕ್ಲಿನಿಕನ್ನು ಶಾಶ್ವತವಾಗಿ ಮುಚ್ಚಲು ಸ್ಥಳೀಯ ಪ್ರಾಧಿಕಾರಕ್ಕೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ನೋಟೀಸ್ ಜಾರಿಯಾಗಿತ್ತು.
ಕಳೆದ ವಾರ ಜಿಲ್ಲಾಧಿಕಾರಿಗಳು ಹಾಗೂ ಕೆಪಿಎಂಇ ಪ್ರಾಧಿಕಾರ ಅಧ್ಯಕ್ಷರು ಕೂಡಾ ಕ್ಲಿನಿಕ್ ಮುಚ್ಚಿಸಲು ನೋಟಿಸ್ ಜಾರಿ ಮಾಡಿದ್ದರು. ಆದರೆ ರೋಸ್ಲಿಯವರು ಕ್ಲಿನಿಕ್ ಮುಚ್ಚಿರಲಿಲ್ಲ.
ಈ ಮಾಹಿತಿ ಪಡೆದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಕೆಪಿಎಂಇ ನೋಡಲ್ ಅಧಿಕಾರಿ ಡಾ. ದೀಪಾ ಪ್ರಭು ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಕ್ಲಿನಿಕ್ ಮುಚ್ಚಿಸಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ, ಸ್ಥಳೀಯ ಕೆಪಿಎಂಇ ಅಧಿಕಾರಿ ಡಾ.ನಂದಕುಮಾರ್ ಬಿ, ಬಿಪಿಎಂ ಆಶಿಕ್, ಗುಲ್ಜಾರ್ ಬಾನು ಹಾಗೂ ಪೋಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
PublicNext
29/06/2022 07:49 pm