ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಾಡ್ಜ್ ಗೆ ಸಿಸಿಬಿ ದಾಳಿ, ಗಾಂಜಾ ಸಹಿತ 12 ವಿದ್ಯಾರ್ಥಿಗಳು ವಶಕ್ಕೆ; "ವಿದ್ಯಾರ್ಜನೆಯಲ್ಲ, ಡ್ರಗ್ಸ್ ವ್ಯಾಪಾರ!"

ಮಂಗಳೂರು: ನಗರದ ವೆಲೆನ್ಸಿಯಾ ಸೂಟರ್ ಪೇಟೆಯಲ್ಲಿನ ವಸತಿಗೃಹಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ನಿಷೇಧಿತ ಮಾದಕದ್ರವ್ಯ ಗಾಂಜಾವನ್ನು ಹೊಂದಿದ್ದ 12 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೇರಳ ನಿವಾಸಿಗಳಾದ, ಪ್ರಸ್ತುತ ಮಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ

ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ.(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂಟಿಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಇವರಲ್ಲಿ 9 ಮಂದಿ ವಿದ್ಯಾರ್ಥಿಗಳು ಯೆನೆಪೋಯ ಕಾಲೇಜಿನ ಪದವಿ ವಿದ್ಯಾರ್ಥಿಗಳಾಗಿದ್ದು, 3 ಮಂದಿ ಇಂದಿರಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು.

ಈ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಗಾಂಜಾವನ್ನು ಹೊಂದಿದ್ದರು‌. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಇವರಿದ್ದ ವಸತಿಗೃಹಕ್ಕೆ ದಾಳಿ ನಡೆಸಿ ಈ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಗಳಿಂದ 900 ಗ್ರಾಂ ತೂಕದ 20,000 ಮೌಲ್ಯದ ಗಾಂಜಾ ವಶ ಪಡಿಸಲಾಗಿದೆ. ಅಲ್ಲದೆ, ಗಾಂಜಾ ಸೇದುವ ಸ್ಮೋಕಿಂಗ್ ಪೈಪ್, ರೋಲಿಂಗ್ ಪೇಪರ್, 4,500 ನಗದು, 11 ಮೊಬೈಲ್ ಹಾಗೂ ಡಿಜಿಟಲ್ ತೂಕ ಮಾಪನ ವಶಪಡಿಸಿದ್ದು, ಈ ಸೊತ್ತಿನ ಮೌಲ್ಯ 2,85,000 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಇವರಲ್ಲಿ 11 ಮಂದಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

09/07/2022 03:27 pm

Cinque Terre

66.66 K

Cinque Terre

1