ಮಂಗಳೂರು: ಅಕ್ರಮವಾಗಿ ಕೂಟ ಸೇರಿಕೊಂಡು ಸಾರ್ವಜನಿಕರು, ವ್ಯಾಪಾರಿಗಳು, ಶ್ರೀಮಂತ ವ್ಯಕ್ತಿಗಳಿಗೆ ಬೆದರಿಕೆಯೊಡ್ಡಿ ಹಣ ಸುಲಿಗೆ, ದರೋಡೆಗೆ ಸಂಚು ರೂಪಿಸಿರುವ ಆರೋಪದಲ್ಲಿ ನಾಲ್ವರನ್ನು ದುಷ್ಕರ್ಮಿಗಳನ್ನು ಬಂದರು ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರನ್ನು ಕುದ್ರೋಳಿ ನಿವಾಸಿಗಳಾದ ಅನಿಶ್ ಅಶ್ರಫ್ ಯಾನೆ ಮಯಾ (24 ), ಮುಹಮ್ಮದ್ ಕಾಮಿಲ್ ( 33 ), ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಕುದ್ರೋಳಿ ವಾಸಿ ಶೇಖ್ ಮುಹಮ್ಮದ್ ಹಾರಿಸ್ ಯಾನೆ ಜಿಗರ್ ( 32 ), ಕಸ್ಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಕೈಸ್ (26) ಬಂಧಿತ ಆರೋಪಿಗಳು. ಪೊಲೀಸರು ಬಂಧಿತ ಆರೋಪಿಗಳಿಂದ ತಲವಾರು, ಚೂರಿ, ಮೆಣಸಿನ ಹುಡಿಯನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ಈ ನಾಲ್ವರು ಆರೋಪಿಗಳು ಅಕ್ರಮ ಕೂಟ ಸೇರಿಕೊಂಡು ಮಾರಕಾಯುಧಗಳನ್ನು ಹಿಡಿದುಕೊಂಡು ವ್ಯಾಪಾರಿಗಳು, ಶ್ರೀಮಂತರು, ಸಾರ್ವಜನಿಕರನ್ನು ಬೆದರಿಸಿ ಹಣ ಸುಲಿಗೆ, ದರೋಡೆ ಮಾಡಲು ಸಂಚು ರೂಪಿಸುತ್ತಿದ್ದಾರೆಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಕ್ರಮ ಕೂಟ ಸೇರಿದ್ದ ಆರು ಮಂದಿಯ ಪೈಕಿ ಮೂವರಲ್ಲಿ ಮಾರಕಾಯುಧವಿತ್ತು. ದಾಳಿಯ ವೇಳೆ ಹಳೆ ಪ್ರಕರಣದ ಆರೋಪಿ ಅಬ್ದುಲ್ ಖಾದರ್ ಫಹಾದ್ ಹಾಗೂ ತಲವಾರು ಹಿಡಿದುಕೊಂಡಿದ್ದ ಇನ್ನೊಬ್ಬ ಆರೋಪಿಯು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಬಂಧಿತರಲ್ಲಿ ನಾಲ್ವರೂ ರೌಡಿಶೀಟರ್‌ಗಳಾಗಿದ್ದು, ನಗರದ ವಿವಿಧ ಠಾಣೆಗಳಲ್ಲಿ ಇವರುಗಳ ಮೇಲೆ ಪ್ರಕರಣ ದಾಖಲಾಗಿದೆ.
Kshetra Samachara
15/07/2022 10:24 pm