ಬೈಂದೂರು: ನಿನ್ನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಆಂಬ್ಯುಲೆನ್ಸ್ ದುರಂತ ಸಂಭವಿಸಿದ ಪರಿಣಾಮ ನಾಲ್ವರ ದುರ್ಮರಣಕ್ಕೆ ಸಂಬಂಧಿಸಿ ಪೊಲೀಸರು ಆಂಬ್ಯುಲೆನ್ಸ್ ಚಾಲಕ ರೋಶನ್ ನನ್ನು ವಶಕ್ಕೆ ಪಡೆದಿದ್ದಾರೆ.
ಬೈಂದೂರು ಪೊಲೀಸರ ವಶದಲ್ಲಿರುವ ಚಾಲಕ ರೋಶನ್‌ನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಮದ್ಯ ಸೇವನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಅತಿ ವೇಗದಿಂದ ಬಂದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್‌ನ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದರು.
PublicNext
21/07/2022 12:34 pm