ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 2013ರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ಮಂಗಳೂರು: ಮಹಿಳೆಗೆ ಕಿರುಕುಳ ಹಾಗೂ ಕೊಲೆ ಬೆದರಿಕೆ ಆರೋಪದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ 2013ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ‌.

ಮಂಗಳೂರಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಅಲಿಯಾಸ್ ನೌಶದ್ (30) ಬಂಧಿತ ಆರೋಪಿ.

2013 ಮಾರ್ಚ್ 22 ರಂದು ಸಂಜೆ ವೇಳೆ ಮೊಗರು ಗ್ರಾಮದ ಕುಕ್ಕಟ್ಟೆ ಎಂಬಲ್ಲಿ ಅಜರುದ್ದೀನ್ ಹಾಗೂ ನೌಶದ್ ಎಂಬವರು ಮಹಿಳೆಯೋರ್ವರ ಚೂಡಿದಾರ್ ಶಾಲನ್ನು ಎಳೆದು ಮಾನಭಂಗವನ್ನುಂಟು ಮಾಡಿದ್ದರು. ಅಲ್ಲದೆ ನ್ಯಾಯಾಲಯದಲ್ಲಿದ್ದ ಆರೋಪಿಗಳ ಮೇಲಿರುವ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದರು. ಆ ಬಳಿಕ ಆರೋಪಿಗಳ ಪೈಕಿ ನೌಶದ್ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಪತ್ತೆಯ ಬಗ್ಗೆ ಬಲೆ ಬಿಸಿರುವ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ್ ಹಾಗೂ ತಂಡ ವಿಳಾಸ ಬದಲಿಸಿ ಕಾಪುವಿನಲ್ಲಿ ವಾಸವಾಗಿದ್ದ ನೌಶದ್ ನನ್ನು ನಿನ್ನೆ ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 5ಕ್ಕೂ ಅಧಿಕ ಹೆದ್ದಾರಿ ಸುಲಿಗೆ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

22/07/2022 02:31 pm

Cinque Terre

11.44 K

Cinque Terre

1

ಸಂಬಂಧಿತ ಸುದ್ದಿ