ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಬ್ ಅಟ್ಯಾಕ್ ಕುರಿತು ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು: ನಿನ್ನೆ ರಾತ್ರಿ ವೇಳೆ ಪಬ್ ಮೇಲೆ ಬಜರಂಗದಳ ದಾಳಿ ನಡೆಸಿರುವ ವಿಚಾರದಲ್ಲಿ ಇಂದು ಪ್ರತಿಕ್ರಿಯೆ ನೀಡಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಬಲ್ಮಠದಲ್ಲಿರುವ ರಿ ಸೈಕಲ್ ದಿ ಲಾಂಜ್ ಪಬ್ ನಿನ್ನೆ ರಾತ್ರಿ 10ರಿಂದ 12 ಮಂದಿ ಜಮಾಯಿಸಿದ್ದರು. ಪಬ್ ಒಳಗೆ ಅಪ್ರಾಪ್ತರು ಮದ್ಯ ಸೇವನೆ ಮಾಡುತ್ತಿದ್ದರೆಂಬ ಆರೋಪ ಬಜರಂಗದವರದ್ದು ಆಗಿತ್ತು.

ಈ ಬಗ್ಗೆ ಬೌನ್ಸರ್ ಜೊತೆ ಬಜರಂಗದಳದ ಯುವಕರು ಮಾತನಾಡಿದ್ದರು. ಬಳಿಕ ಆತ ಈ ಬಗ್ಗೆ ಮ್ಯಾನೇಜರ್ ಜೊತೆ ಮಾತನಾಡಿದ್ದಾನೆ. ಬಳಿಕ ಪಬ್ ಒಳಗಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲಾಗಿದೆ. ಇಲ್ಲಿ ಯಾವುದೇ ಅಟ್ಯಾಕ್, ದೈಹಿಕ ಹಲ್ಲೆಗಳು ನಡೆದಿಲ್ಲೆಂದು ಹೇಳಿದರು. ಪಬ್ ಒಳಗೆ ಯಾರೂ ಪ್ರವೇಶ ಮಾಡಿಲ್ಲ.‌ ನಿನ್ನೆ ನಡೆದ ಘಟನೆಗೂ ಕಿಸ್ ಪಂದ್ಯ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ.‌ ಆ ಪ್ರಕರಣದಲ್ಲಿ ಭಾಗಿಯಾದವರು ಯಾರೂ ನಿನ್ನೆ ಪಬ್ ಪಾರ್ಟಿಯಲ್ಲಿ ಭಾಗವಹಿಸಿಲ್ಲ.‌ ಇನ್ನೂ ಈ ಬಗ್ಗೆ ಯಾರೂ ದೂರು ನೀಡಿಲ್ಲ ದೂರು ನೀಡಿದರೆ ಪ್ರಕರಣ ದಾಖಲು ಮಾಡುತ್ತೇವೆ ಎಂದು ಎನ್. ಶಶಿಕುಮಾರ್ ಹೇಳಿದ್ದಾರೆ.

Edited By : Manjunath H D
PublicNext

PublicNext

26/07/2022 04:13 pm

Cinque Terre

36.21 K

Cinque Terre

2