ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿಟ್ಲದಲ್ಲಿ ಬಿಗಿ ಬಂದೋಬಸ್ತ್-ಶಾಲೆಗಳಿಗೆ ರಜೆ, ಸಂಚಾರ ಸ್ಥಗಿತ

ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲಪೇಟೆಯಲ್ಲಿನ ಹಿಂದೂ ಸಮುದಾಯದ ಅಂಗಡಿಗಳಿಗೆ ತೆರಳಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು.

ಅದರಂತೆ ವಿಟ್ಲಪೇಟೆಯಲ್ಲಿ ಕೆಲವೊಂದು ಅಂಗಡಿಗಳು ಮುಚ್ಚಲ್ಪಟ್ಟಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೊಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಬಸ್ಸು, ಆಟೋ ರಿಕ್ಷಾಗಳು ಈವರೆಗೆ ಎಂದಿನಂತೆ ಓಡಾಟ ನಡೆಸಿವೆ. ಜನಸಂಚಾರ ವಿರಳವಾಗುದ್ದು, ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ ನಾಗರಾಜ್ ಅವರ ನೇತೃತ್ವದ ಪೊಲೀಸರ ತಂಡದಿಂದ ಎಲ್ಲೆಡೆ ಬಿಗು ಬಂದೋಬಸ್ತ್‌ ಏರ್ಪಡಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಗಡಿಪ್ರದೇಶದ ಚೆಕ್ ಪೋಸ್ಟ್‌ನಲ್ಲಿ ಹೆಚ್ಚಿದ ವಾಹನ ತಪಾಸಣೆ:

ಘಟನೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೇರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಗಾ ಇರಿಸಲಾಗುತ್ತಿದೆ.

Edited By : Shivu K
Kshetra Samachara

Kshetra Samachara

27/07/2022 12:39 pm

Cinque Terre

9.16 K

Cinque Terre

0

ಸಂಬಂಧಿತ ಸುದ್ದಿ