ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್‌ನಲ್ಲಿ ಯುವಕ ಹತ್ಯೆ ಕೇಸ್‌: ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ನಗರದ ಸುರತ್ಕಲ್‌ನ ಕಾಟಿಪಳ್ಳದ ಎಂಆರ್ ಪಿಎಲ್ ರಸ್ತೆಯ ಬಟ್ಟೆ ಅಂಗಡಿಯ ಮುಂಭಾಗದಲ್ಲಿ ಕೆಲ ದುಷ್ಕರ್ಮಿಗಳು ಫಾಝಿಲ್ ಎಂಬ ಯುವಕನನ್ನು ಕೊಚ್ಚಿ ಕೊಲೆಗೈದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸುರತ್ಕಲ್ ಸುತ್ತಮುತ್ತಲಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫಾಝಿಲ್ ಹತ್ಯೆಯ ಸ್ಥಳ ಪರಿಶೀಲನೆ ಬಳಿಕ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಸೂಕ್ಷ್ಮ ಪ್ರದೇಶಗಳಾಗಿರುವ ಸುರತ್ಕಲ್, ಮುಲ್ಕಿ, ಬಜ್ಪೆ ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮದ್ಯದಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ. ಐವರಿಗಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ ಎಂದು ಸೂಚನೆ ನೀಡಿದರು.

ಫಾಝಿಲ್ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುತ್ತದೆ. ಪ್ರಕರಣದ ಬಗ್ಗೆ ಪಾರದರ್ಶಕವಾಗಿ, ತ್ವರಿತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ನಾಗರಿಕರು ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಕಾಪಾಡಬೇಕೆಂದು ಪೊಲೀಸ್ ಕಮಿಷನರ್ ತಿಳಿಸಿದರು.

Edited By : Nagesh Gaonkar
PublicNext

PublicNext

28/07/2022 10:52 pm

Cinque Terre

66.28 K

Cinque Terre

0

ಸಂಬಂಧಿತ ಸುದ್ದಿ