ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಆರು ಮಂದಿ ದುಷ್ಕರ್ಮಿಗಳು ಅರೆಸ್ಟ್

ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದಿರುವ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಜುಲೈ 28ರಂದು ಸುರತ್ಕಲ್ ಜಂಕ್ಷನ್ ನಲ್ಲಿ ವಸ್ತ್ರಮಳಿಗೆ ಮುಂಭಾಗ ನಿಂತಿದ್ದ ಫಾಝಿಲ್ ನನ್ನು ಕಾರಿನಲ್ಲಿ ಆಗಮಿಸಿರುವ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಕಾರನ್ನು ದುಷ್ಕರ್ಮಿಗಳಿಗೆ ನೀಡಿದ್ದ ಅಜಿತ್ ಕ್ರಾಸ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹತ್ಯೆಗೆ ಬಳಸಿರುವ ಕಾರನ್ನು ಆ ಬಳಿಕ ಕಾರ್ಕಳದ ಇನ್ನಾ ಎಂಬಲ್ಲಿ ವಶಪಡಿಸಲಾಗಿತ್ತು.

ಪೊಲೀಸರು ಆ ಬಳಿಕ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿ ಇಂದು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Edited By : Nagaraj Tulugeri
PublicNext

PublicNext

02/08/2022 09:46 am

Cinque Terre

22.32 K

Cinque Terre

1