ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶಫೀಕ್ ಬೆಳ್ಳಾರೆಯನ್ನು ಆಗಸ್ಟ್ 6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ವಿಧಿಸಿದ್ದಾರೆ.
ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ ಕಳೆದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭ ಜಾಕೀರ್‌ಗೆ ನ್ಯಾಯಾಂಗ ಬಂಧನ ವಿಧಿಸಿ, ಶಫೀಕ್ ಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಶಫೀಕ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kshetra Samachara
07/08/2022 07:25 pm