ಸುಳ್ಯ: ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಎರಡು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ನಾವೂರಿನ ಅಬಿದ್(22), ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್(28) ಎಂಬವರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರಕ್ಕೇರಿದೆ. ಜು.28ರಂದು ಸವಣೂರಿನ ಜಾಕಿರ್ (29) ಮತ್ತು ಬೆಳ್ಳಾರೆಯ ಶಫೀಕ್ (27) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.ಆ.2ರಂದು ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ(32) ಹಾಗೂ ಹ್ಯಾರೀಸ್(42) ಎಂಬವರನ್ನು ಬಂಧಿಸಲಾಗಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
PublicNext
07/08/2022 10:09 pm