ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಪಿಎಫ್ಐ ಲಿಂಕ್? ದಾಖಲೆಗಳಿಲ್ಲದೆ ನಾವು ಹೇಳೋಲ್ಲ: ಎಡಿಜಿಪಿ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಪಿಎಫ್ಐ ಶಂಕಿತ ಲಿಂಕ್ ಇದೆ. ನಾವು ದಾಖಲಿಲ್ಲದೆ ಏನನ್ನೂ ಹೇಳೋಲ್ಲ. ಪ್ರಕರಣದ ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್ಐ ಲಿಂಕ್ ಇದೆ ಎಂಬುದನ್ನು ಬಹಿರಂಗಪಡಿಸುತ್ತೇವೆ. ಆರೋಪಿಗಳ ಕೇರಳ ಲಿಂಕ್ ಬಗ್ಗೆ ಈಗ ಏನೂ ಹೇಳುವುದಕ್ಕೆ ಆಗುವುದಿಲ್ಲ. ಈಗ ಸೆರೆ ಸಿಕ್ಕ ಆರೋಪಿಗಳೆಲ್ಲ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಮಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಈಗಾಗಲೇ ಏಳು ಮಂದಿಯನ್ನು ದಸ್ತಗಿರಿ ಮಾಡಲಾಗಿದೆ. ಇನ್ನೂ ಮೂವರು ಪ್ರಮುಖ ಹಂತಕರು ಪತ್ತೆಯಾಗಬೇಗಿದೆ. ಅವರ ಬಂಧನಕ್ಕಾಗಿ ಇಂದು ಬೆಳ್ಳಾರೆಯಲ್ಲಿ ದ.ಕ ಜಿಲ್ಲೆಯ ಹಾಗೂ ಇನ್ನಿತರ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದೇವೆ. ಎನ್ಐಎ ಹಾಗೂ ಕರ್ನಾಟಕ ಪೊಲೀಸ್ ಜಂಟಿಯಾಗಿ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ಆರೋಪಿಗಳಲ್ಲಿ ಕೆಲವರು ಭೂಗತರಾಗಿದ್ದಾರೆ. ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗುತ್ತದೆ‌. ಈ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ಗುರುತು ಪತ್ತೆಯಾಗಿದೆ. ಅವರ ಮನೆಯ ವಿಳಾಸ, ತಂದೆ, ತಾಯಿ, ಪತ್ನಿಯ ಬಗ್ಗೆಯೂ ತಿಳಿದಿದೆ‌. ಆದರೆ ಆರೋಪಿಗಳನ್ನು ಬಚ್ಚಿಡುವ ಕಾರ್ಯ ಆಗುತ್ತಿದೆ. ಅವರು ಪ್ಲ್ಯಾನ್ ಆಗಿ ಬೇರೆ ಬೇರೆ ಕಡೆಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ‌ ಎಂದರು.

ಫಾಝಿಲ್ ಹತ್ಯೆಯ ವಿಚಾರದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿರುವವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ನಾಳೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದೇನೆ. ಈ ಪ್ರಕರಣದಲ್ಲೂ ಒಬ್ಬರು ಇಬ್ಬರೂ ಬಂಧನಕ್ಕೆ ಬಾಕಿಯಿದೆ. ಸಮರ್ಪಕ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಅಲೋಕ್ ಕುಮಾರ್ ಹೇಳಿದರು.

Edited By :
Kshetra Samachara

Kshetra Samachara

10/08/2022 04:21 pm

Cinque Terre

9.47 K

Cinque Terre

0